ಬ್ಯಾಂಕಾಕ್: ಕೇವಲ 15 ನಿಮಿಷದಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿದೆ. ಮ್ಯಾನ್ಮಾರ್ ಈ ಭೂಕಂಪಕ್ಕೆ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಪ್ರಬಲ ಭೂಕಂಪ (Myanmar Earthquake) ಸಂಭವಿಸಿದೆ. ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ.
ರಿಕ್ಷರ್ ಮಾಪಕದಲ್ಲಿ ಮೊದಲ ಬಾರಿ ಭೂಕಂಪದ ತೀವ್ರತೆ 7.7, 2ನೇ ಬಾರಿಗೆ 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಹೇಳಿದೆ.
ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50ರ ಸುಮಾರಿಗೆ ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಸಾವು ನೋವುಗಳ ವರದಿಯಾಗಿಲ್ಲ. ಅತ್ತ ಬ್ಯಾಂಕಾಕ್‌ನಲ್ಲೂ (Bangkok) ಭೂಕಂಪದ ಎಫೆಕ್ಟ್ ತಟ್ಟಿದೆ.