ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಡಬದಲ್ಲಿ ನಡೆದಿದೆ.

ಕಡಬದ ಕುಟ್ರುಪ್ಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಈ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ಮೃತ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ.
ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?



















