ಬೆಂಗಳೂರು:ನಗರದ ಖಾಸಗಿ ಹೋಟೆಲ್ ಒಂದರ ಸ್ವಿಮ್ಮಿಂಗ್ ಪೂಲ್ನಲ್ಲಿ ಇಬ್ಬರು ವಿದೇಶಿಗರು ಸಾವನ್ನಪ್ಪಿರುವ ಧೋರಣ ಘಟನೆ ನಡೆದಿದ್ದು, ಹೋಟೆಲ್ ಮ್ಯಾನೇಜ್ಮೆಂಟ್ನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಲೋವಾಕಿಯಾ ಮೂಲದ ಓರಿಯಾಟ್ (45) ಹಾಗೂ ಡಚ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಮೃತಪಟ್ಟ ವಿದೇಶಿ ಪ್ರಜೆಗಳಾಗಿದ್ದಾರೆ. ಸ್ವಿಮ್ಮಿಂಗ್ ಪೂಲ್ನಲ್ಲಿ ಎಲೆಕ್ಟ್ರಿಕ್ ಶಾಕ್ ತಗುಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹಲಸೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತ ಅಲೆಕ್ಸಾಂಡರ್ ಅವರ ಪತ್ನಿ ಹೋಟೆಲ್ ವಿರುದ್ಧ ಅಧಿಕೃತವಾಗಿ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.


















