ಕೋಲಾರ: ಅ.2 ರಂದು ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನಾಪತ್ತೆಯಾಗಿ ಇಂದು (ಶನಿವಾರ) ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಯಳಚೇಪಲ್ಲಿಯ ಕುಪ್ಪಂಪಾಳ್ಯ ಬಳಿ ನಡೆದಿದೆ.
ಧನ್ಯಬಾಯಿ (13) ಹಾಗೂ ಚೈತ್ರಾ ಬಾಯಿ(13) ಶವವಾಗಿ ಪತ್ತೆಯಾದ ಬಾಲಕಿಯರು.
ಈ ಬಾಲಕಿಯರು ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದರು. ಅ.2 ರಂದು ನಿವಾಸದ ಮುಂದೆ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಬಾಲಕಿಯರು ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಸದ್ಯ ಸ್ತಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಮುಳಬಾಗಿಲು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶಿಲಿಸಿದ್ದಾರೆ.
ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.