ಚಿತ್ರದುರ್ಗ : ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ಜಿಲ್ಲಾ ಕಳ್ಳರನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 137 ಗ್ರಾಂ ಚಿನ್ನ, 15 ಗ್ರಾಂ ಬೆಳ್ಳಿ ಹಾಗೂ ಒಂದು ಬೈಕ್ ಸೇರಿದಂತೆ ಒಟ್ಟು ₹21 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ದಾವಣಗೆರೆ ಮೂಲದ ನಾಗರಾಜ ಹಾಗೂ ಬಳ್ಳಾರಿ ಮೂಲದ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?



















