ಚಾಮರಾಜನಗರ: ಬೈಕ್ ಗೆ ಈಚರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಾಲೂಕಿನ ಹರದನಹಳ್ಳಿ ಬಳಿ ನಡೆದಿದೆ. ತಾಲೂಕಿನ ಬ್ಯಾಡಮೂಡ್ಲು ಗ್ರಾಮದ ಅಭಿಷೇಕ್ (23) ಹಾಗೂ ಅಭಿ (21) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಅಲ್ಲದೇ, ಇದೇ ಘಟನೆಯಲ್ಲಿ ಮಾದೇಶ್ (21) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವನ್ನಪ್ಪಿರುವ ಯುವಕರು, ಬಾಳೆಗೊನೆ ಕತ್ತರಿಸುವ ಕೆಲಸ ಮಾಡುತ್ತಿದ್ದರು. ಮೂವರೂ ಒಂದೇ ಬೈಕ್ ನಲ್ಲಿ ಕೆಲಸ ಮುಗಿಸಿ ಹೋಗುತ್ತಿದ್ದ ಸಂದರ್ಭದ್ಲಲಿ ಈಚರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.