ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಹತ್ತಿರದ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್ ಹತ್ತಿರ ನಡೆದಿದೆ.
ಘಟನೆಯಲ್ಲಿ ಸಿದ್ದು(24) ಹಾಗೂ ಪ್ರೀತಮ್(25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ಮಿಕರಿಬ್ಬರು ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದ ಸಂದರ್ಭದಲ್ಲಿ ರೋಲರ್ ಹರಿದು ಸಾವನ್ನಪ್ಪಿದ್ದಾರೆ.
ಘಟನೆಯನ್ನು ಖಂಡಿಸಿರುವ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಗುತ್ತಿಗೆದಾರರು ಬರುವವರೆಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ, ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಒತ್ತಾಯಿಸಲಾಗುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿದ್ದಾರೆ.