ಬಾಗಲಕೋಟೆ : ಎರಡು ಲಾರಿ ಮುಖಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ನಡೆದಿದೆ.
ಸಿಮೆಂಟ್ ತುಂಬಿದ ಬಲ್ಕರ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಲಾರಿಗಳ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ ನಾಲ್ವರು ಸಿಲುಕಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಇನ್ನೊರ್ವನಿಗೆ ಗಂಬೀರಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಜೆಸಿಬಿ ಮೂಲಕ ಹೊರ ರಕ್ಷಣಾ ಕಾರ್ಯ ನಡೆಯುತ್ತಿದೆ. ಲೋಕಾಪುರ ಪೊಲೀಸ್ ಠಾಣೆ ದೂರು ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೋಗಿ ಕಂಬದಲ್ಲೇ ಮೃತಪಟ್ಟ ಯುವಕ



















