ದಾವಣಗೆರೆ: ಇಬ್ಬರು ಯುವಕರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕುಂದುವಾಡ ಕೆರೆಯಲ್ಲಿ ನಡೆದಿದೆ.
ಶಾಂತಿನಗರದ ಚೇತನ್ (22), ಮನು (23) ಮೃತ ದುರ್ದೈವಿಗಳು. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇಂದು (ಮಂಗಳವಾರ) ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಇಬ್ಬರ ಶವಗಳು ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ.
ಯುವಕರು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ | ಹೆಣ್ಣು ಮಗು ಎಂದು ನವಜಾತ ಶಿಶುವನ್ನು ಕೊಂದ ಪಾಪಿ ತಾಯಿ



















