ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ್ ಗ್ರಾಮದ ಭೀಮಾ ನದಿಯಲ್ಲಿ ಸಾವಿನ ಮೇಲೆ ಸಾವು ನಡೆಯುತ್ತಲೇ ಇದೆ. ಇದೀಗ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ವರದಿಯಾಗಿದೆ.
ಮೃತರನ್ನು ಪುಂಡಲಿಕ್ ಮುಲಿಮನಿ (17) ಹಾಗೂ ಮಹೇಶ್ (16) ಎಂದು ಗುರುತಿಸಲಾಗಿದೆ. ಇವರು ಅಫಜಲಪುರ ತಾಲೂಕಿನ ಗೌರ್ (ಕೆ) ಗ್ರಾಮದ ನಿವಾಸಿಗಳಾಗಿದ್ದರು. ಮಾಹಿತಿಯ ಪ್ರಕಾರ, ಹರಕೆ ತೀರಿಸಲು ಮಣ್ಣೂರ್ ಯಲ್ಲಮ್ಮನ ದೇವಸ್ಥಾನಕ್ಕೆ ಬಂದಿದ್ದ ಈ ಇಬ್ಬರು ಸ್ನೇಹಿತರು ನಂತರ ಭೀಮಾ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಿದ್ದ ಹಿನ್ನೆಲೆ ಇಬ್ಬರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ರಸ್ತೆ ಬದಿ ನಿಂತ ಖಾಸಗಿ ಬಸ್ಗೆ KSRTC ಬಸ್ ಡಿಕ್ಕಿ- ಇಬ್ಬರು ಸ್ಪಾಟ್ ಡೆತ್



















