ಬೆಂಗಳೂರು : ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹಾರಗದ್ದೆಯಲ್ಲಿ ವಾಸವಿದ್ದರು.
ಡೊವ್ಯಾರೋ(34) ಮಾನ್ಯುಯಲ್ ನಾಜುಬಿ(32) ಬಂಧಿತರು. ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸ ಇರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ ಜಿಗಣಿ ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸಿದ್ದಾಗ ಇಬ್ಬರು ನೈಜೀರಿಯಾ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ.
ಸದ್ಯ ಇಬ್ಬರನ್ನೂ ವಿದೇಶಿಯರ ನೋಂದಣಿ ಕಚೇರಿಗೆ ರವಾನೆ ಮಾಡಲಾಗಿದ್ದು, ವಿಚಾರಣೆ ವೇಳೆ ಸ್ಟೂಡೆಂಟ್ ವೀಸಾದೊಂದಿಗೆ ಬಂದಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಮಹಿಳೆ ಅರೆಸ್ಟ್!


















