ಉಡುಪಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಬಲಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತೆಕ್ಕಟ್ಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56),ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟಿದ್ದು, ತಾರಾ ದೇವಾಡಿಗ ಪರಿಸ್ಥಿತಿ ಗಂಭೀರವಾಗಿದೆ. ಸಾಲಭಾದೆಯಿಂದ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.