ಬೆಂಗಳೂರು: ಚಂದನವನದ ಮೋಹಕತಾರೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಉಡುಪಿ ಮೂಲದ ಸುಜನ್ ಮತ್ತು ಆದರ್ಶ್ ಬಂಧಿತರು. ಆರೋಪಿಗಳು ದರ್ಶನ್ ಅಭಿಮಾನಿಗಳಾಗಿದ್ದು, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆಯ 7 ಮಂದಿಯನ್ನು ಬಂಧಿಸಲಾಗಿತ್ತು.
ಇತ್ತೀಚೆಗೆ ನಟಿ ರಮ್ಯಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ರೇಣುಕಾಸ್ವಾಮಿಗೆ ನ್ಯಾಯ ದೊರಕಬೇಕು ಎಂಬ ನಿಟ್ಟಿನಲ್ಲಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣವೊಂದರಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಸಂದೇಶ ಹಾಗೂ ಕಮೆಂಟ್ ಮಾಡಿದ್ದರು. ರಮ್ಯಾ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು.


















