ಬೆಂಗಳೂರು: ಕಸದ ಲಾರಿ ಹರಿದ ಪರಿಣಾಮ ಸಹೋದರಿಯರಿಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿಯ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಕಸದ ಲಾರಿ ಹರಿದ ಪರಿಣಾಮ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಗಡಿಲಿಂಗನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ತೆರಳುತ್ತಿತ್ತು. ಆಗ ಮಹಿಳೆಯರಿಬ್ಬರು ಕಸದ ಲಾರಿ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಎದುರು ಬೈಕ್ ಬಂದಿದೆ. ಬೈಕ್ ನಿಂದ ತಪ್ಪಿಸಿಕೊಳ್ಳುವ ಬರದಲ್ಲಿ ತಾವಿದ್ದ ಗಾಡಿಯನ್ನು ಎಡದಿಂದ ಬಲಕ್ಕೆ ತಿರುಗಿಸಿದ್ದಾರೆ. ಆಗ ಇವರಿದ್ದ ಬೈಕ್ ಪಕ್ಕದಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯ ಕೆಳಗೆ ಬಿದ್ದು, ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.