ಕಾರವಾರ : ಗಾಂಜಾ ನಶೆಯಲ್ಲಿ ಗೋಕರ್ಣ ಕಡಲ ತೀರದಲ್ಲಿ ತೂರಾಡುತಿದ್ದ ಬೆಂಗಳೂರು ಮೂಲದ ಇಬ್ಬರು ಟೆಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಂ.ಎಸ್. ಪವನ್ (28) ಹಾಗೂ ರಾಘು ಸೆಲ್ವರಂಗನ್ (30) ಎಂದು ಗುತುತಿಸಲಾಗಿದೆ.
ಇಬ್ಬರು ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಸಮೀಪದ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ಅಮಲಿನಲ್ಲಿ ತೇಲಾಡುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರು ಗಾಂಜಾ ಸೇವಿಸಿರುವುದು ದೃಢವಾಗಿದೆ ಎಂದು ತಿಳಿದುಬಂದಿದೆ. ಟೆಕ್ಕಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!



















