ಕೊಡಗು: ಕೊಡಗು ಜಿಲ್ಲೆ ಕುಶಾಲನಗರ ತಾಲೂಕು ಕುಡಿಗೆಯಲ್ಲಿರುವ ಸೈನಿಕ ಶಾಲೆಯಲ್ಲಿ (Kodagu Sainik School) ಎರಡು ವಾರ್ಡ್ ಬಾಯ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ https://sainikschoolkodagu.edu.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 09 ಕೊನೆಯ ದಿನವಾಗಿದೆ.
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕ 22 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 350 ರೂ. ಅರ್ಜಿ ಶುಲ್ಕ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
- https://sainikschoolkodagu.edu.in/ ಗೆ ಭೇಟಿ ನೀಡಿ.
- ಅಧಿಸೂಚನೆ ಲಿಂಕ್ ನಿಂದ ವಾರ್ಡ್ ಬಾಯ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ
ಪ್ರಾಂಶುಪಾಲರು
ಸೈನಿಕ ಶಾಲೆ
ಕುಶಾಲನಗರ ತಾಲೂಕು
ಕೊಡಗು ಜಿಲ್ಲೆ
ಪಿನ್-571232