ಕೋಲಾರ : ಕೆರೆಗೆ ಬಿದ್ದಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ ಘಟನೆ ಕೋಲಾರದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು.
ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಮಕ್ಕಳು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಮೊಹಮದಿ ಮತ್ತು ಸಲ್ಮಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!



















