ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಟೋಲ್ ಸಮೀಪ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸಿದ್ದು ಕುರಳೆ ಮತ್ತು ಸ್ವರೂಪ ಮಾಳುದೆ ಎಂದು ಗುರುತಿಸಲಾಗಿದೆ. ಇಬ್ಬರೂ ಚಿಕ್ಕೋಡಿ ಪಟ್ಟಣದ ನಿವಾಸಿಗಳಾಗಿದ್ದು, ಕೆಲಸ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಸ್ಕೂಟರ್ ಸವಾರರು ತಮ್ಮ ಮುಂದೆ ಸಾಗುತ್ತಿದ್ದ ಲಾರಿಯನ್ನು ಗಮನಿಸದೇ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕೋಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!


















