ಬೆಂಗಳೂರು : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರವ ಘಟನೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ನಡೆದಿದೆ. ಸುರೇಶ್ (21), ನರಸೇಗೌಡ (22) ಮೃತ ಯುವಕರು ಎಂದು ಗುರುತಿಸಲಾಗಿದೆ.
ಕೃಷಿ ಹೊಂಡಕ್ಕೆ ಇಂದು ನಾಲ್ಕು ಮಂದಿ ಯುವಕರು ಈಜಲು ತೆರಳಿದ್ದರು. ಈ ವೇಳೆ ಆಳ ಅರಿಯದೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರನ್ನು ರಕ್ಷಿಸಲಾಗಿದೆ.
ಸದ್ಯ ಮೃತದೇಹಗಳನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!



















