ಚಿತ್ರದುರ್ಗ: ಕುರಿಗಳ ಮೈ ತೊಳೆಯುತ್ತಿದ್ದ ವೇಳೆ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಜಿ.ಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿಶ್ವನಾಥ್ (23), ಮಾರುತಿ (19) ಮೃತ ಯುವಕರು. ಇಬ್ಬರಿಗೂ ಈಜು ಬಾರದ ಹಿನ್ನೆಲೆ ಚೆಕ್ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯುವಕರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸದ್ಯ ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ | ಡಾ. ಅಶ್ವತ್ಥ್ ನಾರಾಯಣ ಕಿಡಿ



















