ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಪ್ರೊಫೆಸರ್ ಹುದ್ದೆಗಳನ್ನು ಭರ್ತಿ (UAS Bangalore Recruitment 2026) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ನೇಮಕಾತಿ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು
ಒಟ್ಟು ಹುದ್ದೆ: 2
ಹುದ್ದೆ ಹೆಸರು: ಪ್ರೊಫೆಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 2
ಅಗ್ರಿ ಕಲ್ಚರಲ್ ಎಂಜಿನಿಯರಿಂಗ್, ಪ್ಲಾಂಟ್ ಪ್ಯಾಥೋಲಜಿ ವಿಭಾಗದಲ್ಲಿ ತಲಾ ಒಂದು ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್.ಡಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ.. ನೇಮಕಾತಿ ಹೊಂದಿದವರಿಗೆ ಮಾಸಿಕ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ uasbangalore.edu.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ To The Administrative Officer, University of Agricultural Sciences, GKVK, Bengaluru-560065 ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ


















