ಬೆಂಗಳೂರು: ವಿದ್ಯಾ ಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ (UAS Dharwad Recruitment 2026) ನಡೆಸಲಾಗುತ್ತಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ನೇಮಕಾತಿ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಒಟ್ಟು ಹುದ್ದೆ: 03
ಹುದ್ದೆ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಉದ್ಯೋಗ ಸ್ಥಳ: ಧಾರವಾಡ
ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ಧಾರವಾಡ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ, ಬಿ.ಟೆಕ್, ಎಂ.ಫಿಲ್, ಪಿಎಚ್.ಡಿ, ಎಂ.ಇ, ಎಂ.ಟೆಕ್ ಕೋರ್ಸ್ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 45 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ uasd.edu ವೆಬ್ ಸೈಟ್ ಗೆ ಭೇಟಿ ನೀಡಬಹುದು.
ನೇರ ಸಂದರ್ಶನದ ದಿನಾಂಕ, ಸಮಯ
ಆಸಕ್ತ ಅಭ್ಯರ್ಥಿಗಳು 16ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನ ನಡೆಯುವ ಸ್ಥಳ: Office of the Dean (Community Science), College of Community Science, University of Agricultural Sciences, Dharwad – 580005.



















