ಬೆಂಗಳೂರು: ಈಗಷ್ಟೇ ಕೋರ್ಸ್ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್ ನಲ್ಲಿ ಖಾಲಿ (UCO Bank Apprentice Recruitment 2025) ಇರುವ 532 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಲ್ಲ 532 ಹುದ್ದೆಗಳು ಅಪ್ರೆಂಟಿಸ್ ಹುದ್ದೆಗಳಾಗಿವೆ. ಇವುಗಳ ನೇಮಕಾತಿ,ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯುಕೋ ಬ್ಯಾಂಕ್
ಒಟ್ಟು ಹುದ್ದೆಗಳು: 532
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 30
ಹುದ್ದೆಯ ಹೆಸರು: ಅಪ್ರೆಂಟಿಸ್
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಸ್ಥಳೀಯ ಭಾಷೆ ಮೇಲೆ ಹಿಡಿತ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಂದು ವರ್ಷದವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ದೇಶಾದ್ಯಂತ ಇರುವ ಬ್ಯಾಂಕಿನ ಶಾಖೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಬಳಿಕ ನವೆಂಬರ್ 9ರಂದು ಆನ್ ಲೈನ್ ಟೆಸ್ಟ್ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ www.ucobank.com ಗೆ ಭೇಟಿ ನೀಡಬೇಕು.
- ನಿಮಗೆ ಅನ್ವಯಿಸುವ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















