ಬೆಂಗಳೂರು : ಉಡುಪಿ ಹಾಗೂ ದಕ್ಷಿಣ ಕನ್ನಡದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್‌ನಲ್ಲಿ (UCSL Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 7 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 7
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12
ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ, ಬಿ.ಟೆಕ್ ಅಥವಾ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.2 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಕಾರ್ಯಾನುಭವ, ಪಿಪಿಟಿ, ಗುಂಪು ಸಂದರ್ಶನ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ



















