ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ (UCSL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಕಮಿಷನಿಂಗ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 14
ಉದ್ಯೋಗ ಸ್ಥಳ: ಉಡುಪಿ
ನೇರ ಸಂದರ್ಶನದ ದಿನಾಂಕ: ಏಪ್ರಿಲ್ 22
ಕರ್ನಾಟಕದ ಉಡುಪಿ ಹಾಗೂ ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 54,490 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉಳಿದವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ಪಿಪಿಟಿ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು udupicsl.com ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!



















