ಬೆಂಗಳೂರು: ನೀವೇನಾದರೂ ಉಡುಪಿ ಜಿಲ್ಲೆಯವರಾಗಿದ್ದು, ಈಗಷ್ಟೇ ತಾಂತ್ರಿಕ ಶಿಕ್ಷಣ ಕೋರ್ಸ್ ಮುಗಿಸಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ (UCSL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 24 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 24
ಉದ್ಯೋಗ ಸ್ಥಳ: ಉಡುಪಿ
ನೇರ ಸಂದರ್ಶನದ ದಿನಾಂಕ: ಜನವರಿ 21
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಇ ಅಥವಾ ಬಿ ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳಿಗೆ ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ udupicsl.com ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಬಳಿಕ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ತಡರಾತ್ರಿ ಜನಿಸಿದ ಮಗು ಜೀವನ್ಮರಣ ಹೋರಾಟ | ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ



















