ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಸೇರಿ ಹಲವು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 5
ಉದ್ಯೋಗ ಸ್ಥಳ: ಕೊಚ್ಚಿ, ಕೇರಳ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 30
2 ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹಾಗೂ 3 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ ಅಥವಾ ಬಿ.ಇ, ಬಿ.ಟೆಕ್ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 2.20 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಕೆಲಸದ ಅನುಭವ, ಪವರ್ ಪಾಯಿಂಟ್ ಪ್ರೆಸೆಂಟೇಷನ್, ಗ್ರೂಪ್ ಡಿಸ್ಕಷನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳಿಗೆ 1 ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : 13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!



















