ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೂಪರ್ ವೈಸರ್ ಹುದ್ದೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಸೂಪರ್ ವೈಸರ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಮಲ್ಪೆ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 28
ಟೆಸ್ಟಿಂಗ್ ಹಾಗೂ ಮೆಕ್ಯಾನಿಕಲ್ ವಿಭಾಗದಲ್ಲಿರುವ ತಲಾ ಒಂದು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 1.10 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 400 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://cochinshipyard.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ :BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!



















