ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪರಸ್ಪರ ಕಿತ್ತಾಟ ನಡೆಸುತ್ತಿದ್ದಾರೆ. ಈಗ ಕಾಂಗ್ರೆಸ್ ಶಾಸಕ ಬಿ.ಕೆ. ಹರಿಪ್ರಸಾದ್ ಘಟನೆಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.
ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರು ಮುಸ್ಲಿಂ ವೇಷದಲ್ಲಿ ತೂರಿದ್ದರು ಅಂತ ಆರೋಪಿಸಿದ್ದಾರೆ. ಉದಯಗಿರಿ ಗಲಾಟೆ ಬಿಜೆಪಿ, ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯ. ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡುತ್ತಾರೆ. ಇದು ಹೊಸದಲ್ಲ. ನನ್ನ ಹತ್ತಿರ ವಿಡಿಯೋ ಇದೆ. ಶಾಂತಿ ಕದಡುವ ಯತ್ನ ಇವರೇ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.