ಮೈಸೂರು: ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉದಯಗಿರಿ ಪೊಲೀಸ್ ಠಾಣೆ (Udayagiri Police Station) ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೌಲ್ವಿ ಮುಫ್ತಿ (Moulvi) ಮುಸ್ತಾಕ್ ಮಕ್ಬೋಲಿ ಎಂಬಾತನನ್ನು ಬಂಧಿಸಿದ್ದರು. ನಂತರ ಕೋರ್ಟ್(Court) ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಹೀಗಾಗಿ ಸಿಸಿಬಿ ಪೊಲೀಸರು ಆರೋಪಿಯನ್ನು ಮೈಸೂರು ಜೈಲಿನತ್ತ ಕರೆದೊಯ್ದಿದ್ದಾರೆ. ಫೆ. 10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಪೊಲೀಸ್ ಸಿಬ್ಬಂದಿಗಳ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದರು. ಅಧಿಕಾರಿಗಳ ಕಾರಿಗೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದರು. ಈ ಪ್ರಕರಣಕ್ಕೂ ಮುನ್ನ ಬಂಧಿತ ಮೌಲ್ವಿ ಪ್ರಚೋದನಾಕಾರಿ ಭಾಷಣ ಮಾಡಿದ್ದ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈಗ ಆರೋಪಿಯನ್ನು ಬಂಧಿಸಲಾಗಿದ್ದು, ಕೋರ್ಟ್ ಗೆ ಹಾಜರು ಪಡಿಸಲಾಗಿದೆ.