ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್(Udhayanidhi Stalin) ರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಪ್ರಸ್ತುತ ರಾಜ್ಯದ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿದ್ದಾರೆ. ಶೀಘ್ರವೇ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಎಂಕೆ ಸ್ಟಾಲಿನ್ ಕೂಡ ಉದಯನಿಧಿ ಸ್ಟಾಲಿನ್ ರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಏರಿಸುವ ಸುಳಿವು ನೀಡಿದ್ದರು. ಉದಯನಿಧಿ ಸ್ಟಾಲಿನ್ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿರುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಅನುಷ್ಠಾನದ ಪ್ರಮುಖ ಖಾತೆ ನಿರ್ವಹಿಸುತ್ತಿದ್ದಾರೆ.
ಚೆನ್ನೈ ಮೆಟ್ರೋ ರೈಲು ಹಂತ-2 ರಂತಹ ಪ್ರಮುಖ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುತ್ತಾರೆ. ಸನಾತನ ಧರ್ಮ ನಿರ್ಮೂಲನೆ ಅಗತ್ಯ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ನೀಡಿದ್ದಾರೆ.