ಉಡುಪಿ : ಎಕೆಎಂಎಸ್ ಬಸ್ ಮಾಲಿಕ, ರೌಡಿ ಶೀಟರ್ ಸೈಫ್ ಯಾನೆ ಸೈಪುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತಳು ರಿಧಾ ಶಬಾನ(೨೭) ಎಂದು ಗುರುತಿಸಲಾಗಿದ್ದು,ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಒಳ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದಳು ಎಂದು ತನಿಖೆಯಲ್ಲಿ ತಿಳಿದು ಬಂದಿರುತ್ತದೆ.ಹೀಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಸೆಪ್ಟೆಂಬರ್ 27 ರಂದು ಎಕೆಎಂಎಸ್ ಬಸ್ ಮಾಲೀಕ ಸೈಫುದ್ದಿನ್ ನನ್ನ ಕೊಡುವೂರು ಮನೆಯಲ್ಲಿ ಆರೋಪಿಗಳಾದ ಮಹಮ್ಮದ್ ಪೈಸೆಲ್ ಖಾನ್, ಮೊಹಮ್ಮದ್ ಶರೀಫ್ ,ಅಬ್ದುಲ್ ಶುಕುರ್ ಕೊಚ್ಚಿ ಕೊಲೆಗೈದಿದ್ದರೂ .ಪೊಲೀಸರು ಸೆಪ್ಟೆಂಬರ್ 28ರಂದು ಈ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.