ಬೆಂಗಳೂರು/ಉಡುಪಿ : ಕಲಾಕದಂಬ ಆರ್ಟ್ ಸೆಂಟರ್ ಬೆಂಗಳೂರು ಇದರ 16ನೇ ವರ್ಷದ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಚೆನ್ನಮ್ಮನಕೆರೆ ಪರಂಪರಾ ಸಭಾಂಗಣದಲ್ಲಿ ನಡೆಯಿತು.
ಕಳೆದ 42 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಕರಾವಳಿ ಭಾಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ, ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ರಾಘವೇಂದ್ರ ಮಯ್ಯ ಹಾಲಾಡಿ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಯು 25 ಸಾವಿರ ರೂ. ನಗದು, ಬೆಳ್ಳಿಯ ತಟ್ಟೆ,ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದ್ದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ತಜ್ಞ ಪ್ರೊ. ರಾಧಾಕೃಷ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
