ಉಡುಪಿ: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ಉಡುಪಿಯ ಅಂಬಾಗಿಲು ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಪುತ್ತೂರು ನಿವಾಸಿ ಸುಬ್ರಹ್ಮಣ್ಯ ನಗರದ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ.
ಬಸ್ಸು ಕುಂದಾಪುರದಿಂದ ಉಡುಪಿ ಎಡೆಗೆ ಸಾಗುತ್ತಿರುವಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ತೀವೃವಾಗಿ ಗಾಯಗೊಂಡ ಸವಾರರನನ್ನು ಹತ್ತಿರದ ಆಸ್ಪತ್ರೆಗೆ ರವಾನಿಸುವಾಗ ದಾರಿ ಮಧ್ಯದಲ್ಲೇ ಪ್ರಾಣವ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.