ಉಡುಪಿ : ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ.
ಸುಬ್ರಹ್ಮಣ್ಯದ ಯುವರಾಜ್ ಮೃತಪಟ್ಟ ವ್ಯಕ್ತಿ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಇದನ್ನೂ ಓದಿ : ಮನೆ ಖಾಲಿ ಮಾಡುವಂತೆ ಹೇಳಿದ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಮಕ್ಕಳು!



















