ಉಡುಪಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಪತ್ನಿಯೊಂದಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ, ಮಾರಿಯಮ್ಮ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರ ಸಮ್ಮುಖದಲ್ಲಿ ದೇವಿಯ ದರ್ಶನ ಮಾಡಿದರು. ಈ ವೇಳೆ ಪ್ರಸಾದ ನೀಡಿ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.
ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ, ಘಂಟನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್ ಸೇರಿ ಮತ್ತಿತರರು ಈ ಸಂದಭದಲ್ಲಿ ಉಪಸ್ಥಿತರಿದ್ದರು.