ಉಡುಪಿ: ಆದಾಯಕ್ಕಿಂತ ಮೀರಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಉಡುಪಿ ಅಬಕಾರಿ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಮನೆ ಸೇರಿದಂತೆ ಸಂಬಂಧಿತ 15 ಸ್ಥಳಗಳಲ್ಲಿ ದಾಳಿ ನಡೆಸಿ ಸುಮಾರು 9.57 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.

ಎರಡು ದಿನಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ವಿವಿಧ ದಾಖಲೆಗಳು ಮತ್ತು ಆಸ್ತಿಗಳನ್ನು ಪರಿಶೀಲಿಸಿದರು. ದಾಳಿಯ ವೇಳೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು 6,90,64,716 ರೂ. ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ.

ಇದರ ಜೊತೆಗೆ 3,95,941 ರೂ. ನಗದು, 1,47,50,506 ರೂ. ಮೌಲ್ಯದ ಚಿನ್ನಾಭರಣಗಳು, 17,00,000 ರೂ. ಮೌಲ್ಯದ ವಾಹನಗಳು, 25,75,000 ರೂ. ಮೌಲ್ಯದ ಬ್ಯಾಂಕ್ ಠೇವಣಿಗಳು ಹಾಗೂ 72,68,554 ರೂ. ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು 2,66,90,001 ರೂ. ಮೌಲ್ಯದ ಚರಾಸ್ತಿಯೂ ಪತ್ತೆಯಾಗಿದೆ.
ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಸೇರಿಸಿ ಒಟ್ಟು ಸುಮಾರು 9 ಕೋಟಿ 57 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಈ ಸಂಬಂಧ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಇದನ್ನೂಓದಿ : ಗ್ಯಾಸ್ ಟ್ರಬಲ್‌ನಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?



















