ಉಡುಪಿ : ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡವಿಟ್ಟು ಸಾಲ ಪಡೆದ ವಂಚನೆ ಬೆಳಕಿಗೆ ಬಂದಿದೆ. ಇದೀಗ ಶಿರ್ವದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ ಕೋಟ್ಯಾನ್, ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ಸುದೀಪ್, ಏಣಗುಡ್ಡೆ ನಿವಾಸಿ ರಂಜನ್ ಕುಮಾರ್, ಪೆರ್ಡೂರು ನಿವಾಸಿ ಸರ್ವಜಿತ್ ಹೆಚ್ ಕೆ ಮತ್ತು ಮಹಾರಾಷ್ಟ್ರ ಪುಣೆ ನಿವಾಸಿ ರಾಜೇಶ್ ದಿಲೀಪ್ ಪಾಟೀಲ್ ಎಂಬುವವರನ್ನು ಬಂಧಿಸಿದ್ದಾರೆ.
ದೂರು ಪ್ರಕಾರ, ಆರೋಪಿತರು ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ತೋರಿಸಿ ಕರ್ನಾಟಕ ಬ್ಯಾಂಕ್‌ನಲ್ಲಿ ಅಡಮಾನ ಇಟ್ಟು ಸಾಲ ಪಡೆದು ವಂಚನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಇಂತಹ ನಕಲಿ ಚಿನ್ನದ ಅಡಮಾನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ, ಉಡುಪಿ ವೃತ್ತ ನಿರೀಕ್ಷಕ ಕಾಪು ಅವರ ನೇತೃತ್ವದಲ್ಲಿ ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಬೆಂಗಳೂರು, ಗೋವಾ, ಮುಂಬೈ ಮತ್ತು ದೆಹಲಿಗಳಲ್ಲಿ ಹುಡುಕಾಟ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ಆರೋಪಿಗಳಿಂದ ₹4,30,000 ನಗದು, ನಕಲಿ ಹಾಲ್ಮಾರ್ಕ್ ಮಾಡಲು ಬಳಸಿದ ಲೇಸರ್ ಯಂತ್ರ ಹಾಗೂ ಕಂಪ್ಯೂಟರ್ ವಶಪಡಿಸಿಕೊಂಡಿದ್ದಾರೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಇದನ್ನೂ ಓದಿ : ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ | ತಮ್ಮನನ್ನೇ ಕೊಚ್ಚಿ ಕೊಂದ ಅಣ್ಣ



















