ಉಡುಪಿ : ಬೇಳೂರು ಎಜುಕೇಶನ್ ಟ್ರಸ್ಟ್ ಎಂದು ಎರಡು ಸುಳ್ಳು ಟ್ರಸ್ಟ್ ಡೀಡ್‌ಗಳನ್ನು ನೋಂದಾಯಿಸಿಕೊಂಡು, ಕುಂದಾಪುರ ತಾಲ್ಲೂಕಿನ ಬೇಳೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಡೊನೇಷನ್ ರೂಪದಲ್ಲಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಅದಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಆಡಿಟ್ ಮಾಡದೆ ಹಣವನ್ನ ಪಡೆದು ವಂಚಿಸಿ ಗ್ರಾಮ ಪಂಚಾಯತ್ ಕಟ್ಟಡವನ್ನೇ ಟ್ರಸ್ಟಿನ ಕಚೇರಿಯೆಂದು ಟ್ರಸ್ಟ್ ಡೀಡ್ ನಲ್ಲಿ ನಮೂದಿಸಿ, ಬೇಳೂರು ಪ್ರೌಢಶಾಲೆಯ ತರಗತಿಯ ಅವಧಿಯಲ್ಲಿ ಟ್ರಸ್ಟಿನ ಸಭೆಗಳನ್ನು ನಡೆಸಿ ಕರ್ನಾಟಕ ಸರ್ಕಾರದ ಸುತ್ತೋಲೆಗಳನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದೆ.
ನ್ಯಾಯವಾದಿ ಅವಿನಾಶ್ ಶೆಟ್ಟಿ ಇವರು ದಾಖಲೆಗಳ ಸಮೇತ 12 ಜನರ ವಿರುದ್ಧ ಲಿಖಿತ ದೂರು ನೀಡಿದ್ದು, ಆ ಬಗ್ಗೆ ಕುಂದಾಪುರ ನ್ಯಾಯಾಲಯದ ಆದೇಶದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ



















