ಉಡುಪಿ : ಮೈಸೂರು ದಸರಾ ಮಹೋತ್ಸವವನ್ನು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಒಪ್ಪದ ‘ಬೇರೆ ಧರ್ಮದ’ ಮಹಿಳೆಯ ಮೂಲಕ ಉದ್ಘಾಟನೆ ನಡೆಸಲು ಮುಂದಾದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಿ ಷಡ್ಯಂತ್ರ ರೂಪಿಸಿದ ಹಿಂದೂ ವಿರೋಧಿ ಶಕ್ತಿಗಳಿಗೆ ಮಣಿದು ರಾಜ್ಯ ಸರಕಾರ ಈ ನಿರ್ಧಾರ ಮಾಡಿದಂತಿದೆ. ಮೈಸೂರು ಒಡೆಯರ ಸಂಸ್ಥಾನದ ಆಳ್ವಿಕೆಯ ಕಾಲದಿಂದ ನಡೆಯುತ್ತಿರುವ ಮೈಸೂರು ಚಾಮುಂಡೇಶ್ವರಿಯ ದಸರಾ ಮಹೋತ್ಸವ ವಿಚಾರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿರ್ಧಾರವನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಿ ದೇವಸ್ಥಾನದ ಪಾವಿತ್ರ್ಯತೆಗೆ ಪೂರಕವಾಗಿ ಯೋಗ್ಯ ವ್ಯಕ್ತಿಯಿಂದ ದಸರಾ ಉದ್ಘಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.