ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನೆಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಮೊದಲ ಗಡುವು ಮುಕ್ತಾಯವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಶೇ. 63% ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ.
ಒಟ್ಟು ಉಡುಪಿ ಜಿಲ್ಲೆಯಲ್ಲಿ 3,62,093 ಮನೆಗಳಿದ್ದು, ನಿನ್ನೆ ಸಂಜೆಯ ತನಕ 2,28157 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಶೇ. 63% ರಷ್ಟು ಸಾಧನೆ ಮಾಡಲಾಗಿದೆ.
ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಗರಿಷ್ಠ ಶೇಕಡಾ 85.6 ರಷ್ಟು ಸಮೀಕ್ಷೆಯಾಗಿದ್ದು, ಉಡುಪಿ ತಾಲ್ಲೂಕಿನಲ್ಲಿ ಕೇವಲ ಶೇಕಡಾ 40.7ರಷ್ಟು ಸಮೀಕ್ಷೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಸಮೀಕ್ಷೆಗೆ ಗೈರಾದ ನಾಲ್ವರು ಶಿಕ್ಷಕರನ್ನು ಈಗಾಗಲೇ ಅಮಾನತುಗೊಳಿಸಲಾಗಿದ್ದು, ಒಟ್ಟು ಗಣತಿಗೆ 3231ಮಂದಿ ಗಣತಿದಾರರನ್ನು ನಿಯೋಜಿಸಲಾಗಿದೆ.



















