ಉಡುಪಿ : ಭಾರತ ಹಣಕಾಸು ಸಚಿವಾಲಯದ ಮಾರ್ಗಸೂಚಿ ಅನ್ವಯ ದೀರ್ಘ ಕಾಲದವರೆಗೆ ಹಕ್ಕು ಪಡೆಯದೇ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಹಾಗೂ ಷೇರುಗಳನ್ನು ಅವರ ವಾರಸುದಾರರಿಗೆ ಕಾನೂನುಬದ್ದವಾಗಿ ಹಸ್ತಾಂತರಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯಿತಿ, ಆರ್.ಬಿ.ಐ ಲೀಡ್ ಬ್ಯಾಂಕ್ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕುಗಳ ಆಶ್ರಯದಲ್ಲಿ ವಿಶೇಷ ಶಿಬಿರವನ್ನು ಜಿಲ್ಲೆಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಿಶ್ಚಿತ್ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 78 ಕೋಟಿ ರೂ. ಮೌಲ್ಯದ ನಿಷ್ಕ್ರಿಯಗೊಂಡ ಖಾತೆಗಳಿವೆ. ಆ ಖಾತೆಯಲ್ಲಿರುವ ಹಣವನ್ನು ವಾರಸುದಾರರಿಗೆ ತಲುಪಿಸುವ ಉದ್ದೇಶದಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲೆಯ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿಸೆಂಬರ್ 31 ರ ವರೆಗೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದ್ದು, ಜನರು ಅದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹುಲಿ ದಾಳಿ ತಪ್ಪಿಸಿ, ಮನುಷ್ಯರ ಜೀವ ರಕ್ಷಿಸಿ | ಹನಗೋಡು ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ



















