ಉಡುಪಿ : ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋಗೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ.
ನಗರದ ಐರೋಡಿ ಬಿಲ್ಡಿಂಗ್‌ನಲ್ಲಿ ಪಾರ್ಕ್ ಮಾಡಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಅತೀ ವೇಗದಿಂದ ಪರಿವಾರ್ ಸ್ವೀಟ್ ಅಂಗಡಿಯ ಕಡೆಗೆ ಹಿಮ್ಮುಖವಾಗಿ ಚಲಿಸಿದೆ.
ಪರಿಣಾಮ ಸಿಟಿ ಸೆಂಟರ್ ಮಾರ್ಗದಿಂದ ಸಂಸ್ಕೃತ ಕಾಲೇಜು ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳನ್ನು ಗುದ್ದಿಕೊಂಡು ಚಿಪ್ಸ್ ಅಂಗಡಿಯೊಂದಕ್ಕೆ ನುಗ್ಗಿದೆ. ಇದರಿಂದ ಬೈಕ್ ಸವಾರ ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ. ಈ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.
ಇದನ್ನೂ ಓದಿ : ಐಪಿಎಲ್ 2026 | ಕೆಕೆಆರ್ ತಂಡಕ್ಕೆ ‘ಬಾಂಗ್ಲಾ’ ಭೀತಿ ; ಮುಸ್ತಾಫಿಜುರ್ ಆಯ್ಕೆ ಸುತ್ತ ರಾಜಕೀಯ ವಿವಾದ!



















