ಉಡುಪಿ: ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಇಂದು ವಿಶ್ವಶಾಂತಿ ಸಮಾವೇಶ ನಡೆಯಿತು. ವಿಶೇಷ ಅಭ್ಯಾಗತರಾಗಿ ಅಮೆರಿಕಾದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಲೆ, ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ, ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸೇರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಪರ್ಯಾಯ ಪುತ್ತಿಗೆ ಶ್ರೀಗಳಾದ ಸುಗುಣೇಂದ್ರತೀರ್ಥರು ಅಧ್ಯಕ್ಷತೆ ವಹಿಸದ್ದ ಕಾರ್ಯಕ್ರಮದಲ್ಲಿ ಆಕರ್ಷಣೀಯ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದು ಅಬ್ದುಲ್ ನಝೀರ್. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಇವರು ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂವಿಧಾನಿಕ ಪೀಠದಲ್ಲಿದ್ದರು. ಪ್ರಸ್ತುತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಉಡುಪಿ ಒಂದು ಪಟ್ಟಣ ಮಾತ್ರವಲ್ಲ ಇದು ಜೀವಂತ ಪರಂಪರೆ.ಭಕ್ತಿ, ತತ್ವಶಾಸ್ತ್ರ, ಸಾಂಸ್ಕೃತಿಕ ಏಕತೆಯಲ್ಲಿ ಉಡುಪಿ ವಿಶ್ವಕ್ಕೆ ಮಾರ್ಗದರ್ಶಿಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ



















