ಉಡುಪಿ : ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಪಡುಬಿದ್ರೆ ರಾ. ಹೆದ್ದಾರಿ 66ರಲ್ಲಿ ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನ ‘ಗೌಜಿ ಇವೆಂಟ್ಸ್’ ಮಾಲೀಕ ಅಭಿಷೇಕ್ ಮೃತ ವ್ಯಕ್ತಿಯಾಗಿದ್ದಾರೆ.
ನಿನ್ನೆ ತಡರಾತ್ರಿ ಎರಡು ಗಂಟೆ ವೇಳೆಗೆ ತೆಂಕ ಎರ್ಮಾಳು ಬಳಿ ಅಪಘಾತ ನಡೆದಿದ್ದು, ಉಡುಪಿ ಕಡೆಯಿಂದ ಮಂಗಳೂರಿಗೆ ಅಭಿಷೇಕ್ ಕಾರಿನಲ್ಲಿ ಒಬ್ಬರೇ ತೆರಳುತ್ತಿದ್ದರು. ಎರ್ಮಾಳು ತೆಂಕ ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಭಿಷೇಕ್‌ಗೆ ಗಂಭೀರ ಗಾಯಗಳಾಗಿತ್ತು.
ಅಭಿಷೇಕ್ ಹಿಂಬದಿ ವಾಹನಗಳಲ್ಲಿ ಅವರ ಗೆಳೆಯರಿದ್ದರು. ಹೀಗಾಗಿ ಕೂಡಲೇ ಸ್ಥಳೀಯರ ಸಹಕಾರದಿಂದ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿದ್ದಾರೆ. ಘಟನಾ ಸಂಬಂಧ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ



















