ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಲಕ್ಷಾಂತರ ರೂಪಾಯಿ ಸಂಬಳ ದೊರೆಯುವ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2025) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 8
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸೀನಿಯರ್ ಮೊಬೈಲ್ ಫ್ರಂಟ್ ಎಂಡ್ ಡೆವಲಪರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 21
ಬೆಂಗಳೂರಿನಲ್ಲಿ ಖಾಲಿ ಇರುವ ಸೀನಿಯರ್ ಮೊಬೈಲ್ ಫ್ರಂಟ್ ಎಂಡ್ ಡೆವಲಪರ್, ಸೀನಿಯರ್ ಮೊಬೈಲ್ ಬ್ಯಾಕ್ ಎಂಡ್ ಡೆವಲಪರ್, ಪ್ರಿನ್ಸಿಪಲ್ ಆರ್ಕಿಟೆಕ್ಟ್, ಡೇಟಾ ಸೈನ್ಸ್ ಆರ್ಕಿಟೆಕ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಇ, ಬಿ ಟೆಕ್, ಎಂಎಸ್, ಎಂ ಟೆಕ್, ಎಂಇ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ tc@uidai.net.in ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಮೇಲ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 30ರಿಂದ 50 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ವಿಮಾ ಕಂಪನಿಯಲ್ಲಿ 300 ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ



















