ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಂದು ನಿರ್ದೇಶಕ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡೈರೆಕ್ಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026ರ ಫೆಬ್ರವರಿ 23
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. deputation@uidai.net.in ಗೆ ಇಮೇಲ್ ಮಾಡುವ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 2.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
Director (HR), Unique Identification Authority of India, Bangla Sahib Road, Behind Kali Mandir, Gole Market, New Delhi-110 001
ಇದನ್ನೂ ಓದಿ: ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನರ್ಸ್, ಕೌನ್ಸೆಲರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ



















