ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಂದು ಅಕೌಂಟಂಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಅಕೌಂಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 92 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
Director (HR), Unique Identification Authority of India (UIDAI), Regional Office, 3rd Floor, South Wing, Khanija Bhavan, No. 49, Race Course Road, Bengaluru – 560 001
ಇದನ್ನೂ ಓದಿ : ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ



















