ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಡೆಪ್ಯೂಟಿ ಡೈರೆಕ್ಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡೆಪ್ಯೂಟಿ ಡೈರೆಕ್ಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 16
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು (ಮಾನವ ಸಂಪನ್ಮೂಲ), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಆಧಾರ್ ಕಾಂಪ್ಲೆಕ್ಸ್, ಎನ್ ಟಿಐ ಲೇಔಟ್, ಟಾಟಾ ನಗರ, ಕೊಡಿಗೇಹಳ್ಳಿ, ತಂತ್ರಜ್ಞಾನ ಕೇಂದ್ರ, ಬೆಂಗಳೂರು – 560092.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!



















