ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಅವಕಾಶದ ಬಾಗಿಲು ತೆರೆದಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡೆಪ್ಯೂಟಿ ಡೈರೆಕ್ಟರ್ ಹಾಗೂ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡೆಪ್ಯೂಟಿ ಡೈರೆಕ್ಟರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20
1 ಪ್ರೈವೇಟ್ ಸೆಕ್ರೆಟರಿ, 1 ಡೆಪ್ಯೂಟಿ ಡೈರೆಕ್ಟರ್, 1 ಅಕೌಂಟಂಟ್, 3 ಟೆಕ್ನಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 56 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Director (HR), Unique Identification Authority of India (UIDAI), Aadhaar Complex, NTI Layout, Tata Nagar, Kodigehalli, Technology Centre, Bengaluru
ಇದನ್ನೂ ಓದಿ : ಮೊಬೈಲ್ ಶಾಪ್ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿತ | ನಾಳೆ ಚಿತ್ರದುರ್ಗ ಬಂದ್‌ಗೆ ಕರೆ



















